ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ನಲ್ಲಿ ನಿನ್ನೆ ತಡರಾತ್ರಿ ಪ್ರಯಾಣಿಕರನ್ನು ತುಂಬಿದ್ದ ಪಿಕ್ ಅಪ್ ವಾಹನಕ್ಕೆ ವಿದ್ಯುತ್ ಸ್ಪರ್ಶವಾಗಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಲ್ ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೆಖ್ಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಧಾರ್ಲಾ ಸೇತುವೆಯ ಬಳಿ ಈ ಘಟನೆ ನಡೆದಿದೆ. ಜಲ್ಪೇಶ್ ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕ್ಅಪ್ ವ್ಯಾನ್ ಗೆ ವಿದ್ಯುತ್ ಪ್ರವಹಿಸಿದೆ. ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿದ್ದ ಡಿಜೆ ಸಿಸ್ಟಂನ ಜನರೇಟರ್ ನ ವೈರಿಂಗ್ ನಿಂದ ಈ ಘಟನೆ ಸಂಭವಿಸಿದೆ ಎಂದು ಮತಭಂಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವರ್ಮಾ ಹೇಳಿದ್ದಾರೆ.










