ಭಾರೀ ಮಳೆ : ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ ಶಾಲಾ ಕಾಲೇಜುಗಳಿಗೆ ರಜೆ…

43
firstsuddi

ದಕ್ಷಿಣ ಕನ್ನಡ/ಉತ್ತರ ಕನ್ನಡ/ಕೊಪ್ಪಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎರಡು ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಾಲೂಕಿನ ಶಾಲಾ ಕಾಲೇಜಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ಆದೇಶಿಸಿದ್ದಾರೆ. ಬೆಳಿಗ್ಗೆಯಿಂದಲೇ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.