ಲಂಚ ಬೇಡಿಕೆ ಪ್ರಕರಣ : ಜೆ.ಮಂಜುನಾಥ್ ಜಾಮೀನು ಅರ್ಜಿ ವಜಾ…

69
firstsuddi

ಬೆಂಗಳೂರು : ಲಂಚ ಬೇಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ನ್ಯಾ.ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಎಫ್ಎಸ್ಎಲ್​ನಿಂದ ವರದಿ ಇನ್ನೂ ಬರಬೇಕಿದೆ. ಜಿಲ್ಲಾಧಿಕಾರಿ ಹುದ್ದೆ ದುರ್ಬಳಕೆಯ ಗಂಭೀರ ಆರೋಪವಿದೆ ಎಂದು ಎಸಿಬಿ ಪರ ವಕೀಲ ಪಿ.ಎನ್.ಮನಮೋಹನ್ ವಾದಿಸಿದ್ದಾರೆ.

ಏನಿದು ಪ್ರಕರಣ ?
ಭ್ರಷ್ಟಾಚಾರ ಆರೋಪದಲ್ಲಿ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರನ್ನು ಯಶವಂತಪುರದಲ್ಲಿರುವ ಅವರ ನಿವಾಸದಲ್ಲಿ ಜುಲೈ 4 ರಂದು ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಮಂಜುನಾಥ್ ವಿರುದ್ಧ ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದಿರುವ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದಾರೆ.