ಸಿದ್ದರಾಮಯ್ಯರೊಂದಿಗೆ ವಿಶೇಷ ಬಾಂಧವ್ಯವಿದೆ : ರಾಹುಲ್ ಗಾಂಧಿ.

76
firstsuddi

ದಾವಣಗೆರೆ : ನಾನು ಹುಟ್ಟುಹಬ್ಬ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಭಾಗವಹಿಸಲ್ಲ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯನವರೊಂದಿಗಿನ ವಿಶೇಷ ಬಾಂಧವ್ಯ ಕಾರಣ. ನಾನೊಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯನವರನ್ನು ತುಂಬಾ ಇಷ್ಟಪಡುತ್ತೇನೆ. ಅಷ್ಟೇ ಅಲ್ಲ ಅವರ ವಿಚಾರಧಾರೆಗಳನ್ನೂ ನಾನು ಮೆಚ್ಚುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ರಾಜ್ಯದ ಜನತೆ ಇಂದಿಗೂ ಸ್ಮರಿಸುತ್ತಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಮುಂದೆಯೂ ಕೂಡ ರಾಜ್ಯದ ಜನತೆಗೆ ಉತ್ತಮ ಯೋಜನೆಗಳನ್ನು ಕೊಡುತ್ತೇವೆ ಎಂದು ಭರವಸೆ ಕೊಟ್ಟರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ಸಮುದಾಯಗಳು ಶಾಂತಿ, ಸಾಮರಸ್ಯದಿಂದ ಬಾಳುತ್ತಿದ್ದರು. ಯಾರಿಗೂ ಭಯವಿರಲಿಲ್ಲ. ಆದರೆ, ಈಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಅಶಾಂತಿ ನೆಲೆಸಿದೆ. ದೇಶದಲ್ಲಿ ಕಾಂಗ್ರೆಸ್ ಸಾಮರಸ್ಯ ಮೂಡಿಸಿದರೆ ಬಿಜೆಪಿ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜನರನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದರು.