ತಡರಾತ್ರಿ ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ.

56
firstsuddi

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ನಗರದ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ರಾಜ್ಯದ ಸಚಿವರುಗಳಾದ ಆರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಡಾ.ಅಶ್ವತ್ ನಾರಾಯಣ್, ಎಸ್.ಟಿ ಸೋಮಶೇಖರ್ ಸೇರಿದಂತೆ ಅನೇಕ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.

ಅಮಿತ್ ಶಾ ಅವರು ಬೆಳಗ್ಗೆ 11 ಗಂಟೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಡೆಯುವ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (CII) ಸಂಕಲ್ಪ ಸಿದ್ದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ ಯಲಹಂಕದ ಕೆಎಂಎಫ್ ಮದರ್ ಡೈರಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 1 ಗಂಟೆಯಿಂದ 2 ಗಂಟೆವರೆಗೆ ಅಮಿತ್ ಶಾ ಸಮಯ ಮೀಸಲಿರಿಸಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸರಣಿ ಕೊಲೆಗಳು, ಬಿಜೆಪಿ ಕಾರ್ಯಕರ್ತರ ಆಕ್ರೋಶ, ರಾಜೀನಾಮೆ ಕೊಟ್ಟ ಘಟನೆಗಳ ಬಗ್ಗೆ ಅಮಿತ್ ಶಾ ಅವರಿಗೆ ಸಿಎಂ ಬೊಮ್ಮಾಯಿ ಸಂಪೂರ್ಣ ವರದಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನದ ನಂತರ ದೆಹಲಿಗೆ ವಾಪಸ್ ತೆರಳಲಿದ್ದಾರೆ.