ನಿರುದ್ಯೋಗ, ಹಣದುಬ್ಬರ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ…

68
firstsuddi

ನವದೆಹಲಿ : ಹಣದುಬ್ಬರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು ಪೊಲೀಸರು ವಶಕ್ಕೆ ಪಡೆದರು.

ಸಂಸತ್ತಿನ ಹೊರಗೆ ಧರಣಿ ನಡೆಸಿದ ಸಂಸದರೊಂದಿಗೆ ರಾಹುಲ್ ಗಾಂಧಿ ರಾಷ್ಟ್ರಪತಿ ಭವನದತ್ತ ಹೊರಟಿದ್ದರು. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಅಧೀರ್ ರಂಜನ್ ಚೌಧರಿ ಮತ್ತು ಕೆ.ಸಿ ವೇಣುಗೋಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಕಾಂಗ್ರೆಸ್ ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ ಅಂತ ಪೊಲೀಸರು ಹೇಳಿದ್ದಾರೆ.

ಹಣದುಬ್ಬರ ಮತ್ತು ಬೆಲೆ ಏರಿಕೆಯ ವಿಷಯವನ್ನು ಪ್ರಸ್ತಾಪಿಸಲು ಎಲ್ಲಾ ಕಾಂಗ್ರೆಸ್ ಸಂಸದರು ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದರು ಆದರೆ ಅವರು ನಮ್ಮನ್ನು ಇಲ್ಲಿಂದ ಮುಂದೆ ಹೋಗಲು ಬಿಡುತ್ತಿಲ್ಲ. ಜನರ ಸಮಸ್ಯೆಗಳನ್ನು ಎತ್ತುವುದು ನಮ್ಮ ಕೆಲಸ… ಕೆಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ, ಥಳಿಸಿದ್ದಾರೆ ಅಂತ ಕಾಂಗ್ರೆಸ್ ಸಂಸದರು ಆರೋಪಿಸಿದರು.

ಮತ್ತೊಂದೆಡೆ ಪ್ರತಿಭಟನೆಯ ಸಮಯದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಎಐಸಿಸಿ ಕಚೇರಿ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳ ಮೇಲಿಂದ ಜಿಗಿಯಲು ಯತ್ನಿಸಿದ ಘಟನೆ ಜರುಗಿತು. ನಂತರ ಅವರನ್ನು ಪೊಲೀಸರು ಅವರನ್ನು ವಶಕ್ಕೆ ಪಡೆದರು.