4 ವರ್ಷದ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದ ಕ್ರೂರಿ ತಾಯಿ!

80
firstsuddi

ಬೆಂಗಳೂರು : ಹೆತ್ತ ತಾಯಿಯೇ ತನ್ನ ನಾಲ್ಕು ವರ್ಷದ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದಿರುವ ಭಯಾನಕ ಘಟನೆ ನಗರದಲ್ಲಿ ನಡೆದಿದೆ.

ಸಂಪಂಗಿ ರಾಮನಗರದ ಅದ್ವೈತ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಮಗುವನ್ನು ಜತಿ ಎಂದು ಗುರುತಿಸಲಾಗಿದೆ. ತಾಯಿ ತನ್ನ ಮಗುವನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜತಿ ಬುದ್ಧಿಮಾಂದ್ಯ ಮಗುವಾಗಿದ್ದು, ಮಾತು ಬರುತ್ತಿರಲಿಲ್ಲ. ಹೀಗಾಗಿ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದಿದ್ದಾಳೆ. ಮೇಲಿಂದ ಬಿದ್ದ ರಭಸಕ್ಕೆ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ.

ಸುಷ್ಮಾ ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್ ನಲ್ಲಿ ಮಗುವನ್ನು ಬಿಟ್ಟು ಬಂದಿದ್ದಳು. ಈ ವೇಳೆ ಪತಿ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಸುಷ್ಮಾ ನಾಲ್ಕು ವರ್ಷಗಳಿಂದ ದಂತ ವೈದ್ಯೆಯಾಗಿ ಪ್ರ್ಯಾಕ್ಟಿಸ್ ಮಾಡುತ್ತಿದ್ದಾಳೆ. ಪತಿ ಖಾಸಗಿ ಕಂಪನಿಯಲ್ಲಿ ಇಂಜಿನೀಯರ್ ಆಗಿದ್ದಾರೆ. ಸದ್ಯ ಸುಷ್ಮಾಳನ್ನ ಸಂಪಂಗಿ ರಾಮನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.