ಮಹಿಳೆ ಮೇಲೆ ಹಲ್ಲೆ ಆರೋಪ – ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಬಂಧನ…

61
firstsuddi

ಲಕ್ನೋ : ಮಹಿಳೆಯೊಬ್ಬರನ್ನು ನಿಂದಿಸಿದ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ನೊಯ್ಡಾದ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಅವರನ್ನು ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಇಂದು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆ ಮೇಲೆ ತ್ಯಾಗಿ ಹಲ್ಲೆ ನಡೆಸಿದ್ದರು. ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದರು. ಘಟನೆ ಬಳಿಕ ಶ್ರೀಕಾಂತ್ ತ್ಯಾಗಿ ನಾಪತ್ತೆಯಾಗಿದ್ದರು. ಪೊಲೀಸರು ಸತತ ಹುಡುಕಾಟ ನಡೆಸುತ್ತಿದ್ದರು. ಅಲ್ಲದೇ ಶ್ರೀಕಾಂತ್ ತ್ಯಾಗಿ ಬಗ್ಗೆ ಸುಳಿವು ನೀಡಿದವರಿಗೆ 25 ಸಾವಿರ ಬಹುಮಾನವನ್ನೂ ಘೋಷಿಸಲಾಗಿತ್ತು. ಇದೀಗ ತ್ಯಾಗಿಯನ್ನು ಬಂಧಿಸಲಾಗಿದೆ.

ನಿನ್ನೆಯಷ್ಟೇ ಬಿಜೆಪಿಯ ಕಿಸಾನ್ ಮೋರ್ಚಾದ ಆಪಾದಿತ ಸದಸ್ಯ ಶ್ರೀಕಾಂತ್ ತ್ಯಾಗಿ ಅವರಿಗೆ ಸೇರಿದ್ದ ಅಕ್ರಮ ಕಟ್ಟಡವನ್ನು ಬುಲ್ಡೋಜರ್ ಬಳಸಿ ಕೆಡವಲಾಗಿತ್ತು.