ಲಕ್ನೊ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನಲೆಯಲ್ಲಿ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಸಹಾಯವಾಣಿಯ ಆಪರೇಷನ್ ಕಮಾಂಡರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ಸಂದೇಶ ಕಳುಹಿಸುವವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










