ನವದೆಹಲಿ : ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿಗಳಾಗಿರುವ ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ರಾಷ್ಟ್ರಪತಿ ಭವನ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 26ರಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ನಿವೃತ್ತರಾದ ನಂತರ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಯು.ಯು.ಲಲಿತ್ ನವೆಂಬರ್ 8ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಅವರು ಮೂರು ತಿಂಗಳಿಗಿಂತ ಕಡಿಮೆ ಅವಧಿಗೆ ಮಾತ್ರ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ನಿರ್ವಹಿಸಲಿದ್ದಾರೆ.










