ಮಂಗಳೂರು : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರವೀಣ್ ಹತ್ಯೆಗೈದು ಬಳಿಕ ಮೂವರು ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ಪೊಲೀಸರು ಆರೋಪಿಗಳ ಪತ್ತೆಗಾಗಿ ಕೇರಳದಲ್ಲಿ ಬೀಡುಬಿಟ್ಟಿದ್ದರು. ಇದೀಗ ಕೇರಳದಲ್ಲಿ ಮೂವರು ಆರೋಪಿಗಳಾದ ಶಿಯಾಬ್, ರಿಯಾಝ್, ಬಶೀರ್ ನನ್ನು ನಿನ್ನೆ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಬಗ್ಗೆ ಇಂದು ಮಧ್ಯಾಹ್ನ 12.30ಕ್ಕೆ ಮಂಗಳೂರಲ್ಲಿ ಕರೆದಿರುವ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.










