ಮಹಾರಾಷ್ಟ್ರದಲ್ಲಿ ಐಟಿ ದಾಳಿ – 390 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ…

47
firstsuddi

ಮುಂಬೈ : ಮಹಾರಾಷ್ಟ್ರದಲ್ಲಿ ಐಟಿ ಇಲಾಖೆ ಭರ್ಜರಿ ದಾಳಿ ನಡೆಸಿದೆ. ದಾಳಿಯ ವೇಳೆ 390 ಕೋಟಿ ರೂ. ಮೊತ್ತದ ಬೇನಾಮಿ ಆಸ್ತಿ ಪತ್ತೆಯಾಗಿದ್ದು, ಇದೀಗ ಅದನ್ನು ವಶಪಡಿಸಿಕೊಳ್ಳಲಾಗಿದೆ. ಜಲ್ನಾ ಜಿಲ್ಲೆಯ ಉಕ್ಕು, ಬಟ್ಟೆ ವ್ಯಾಪಾರಿ ಮತ್ತು ರಿಯಲ್ ಎಸ್ಟೇಟ್ ನಡೆಸುತ್ತಿರುವ ವ್ಯಕ್ತಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.

ಆಗಸ್ಟ್ 1 ರಿಂದ 8 ರವರೆಗೆ ಈ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಸುಮಾರು 58 ಕೋಟಿ ರೂಪಾಯಿ ನಗದು, 32 ಕೆಜಿ ಚಿನ್ನ ಸೇರಿದಂತೆ, 14 ಕೋಟಿ ರೂ. ಮೌಲ್ಯದ ಮುತ್ತುಗಳು ಮತ್ತು ವಜ್ರಗಳು ಹೀಗೆ ಒಟ್ಟು 390 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ದಾಳಿಯ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದೆ ಮತ್ತು ಇವುಗಳ ಪರಿಶೀಲನೆ ನಡೆಸಲಾಗುತ್ತಿದೆ.