ಎಸಿಬಿ ರದ್ದು ವಿಚಾರ… ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

56
firstsuddi

ಬೆಂಗಳೂರು : ಎಸಿಬಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ವಿಧಾನಸೌಧದಲ್ಲಿ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಬಿ ರದ್ದು ಕುರಿತಾಗಿ ನಿನ್ನೆ ಹೈಕೋರ್ಟ್ ಆದೇಶ ಆಗಿದೆ. ನಮ್ಮ ಪಕ್ಷದ ಪ್ರಣಾಳಿಕೆ ಗಮನದಲ್ಲಿಟ್ಟುಕೊಂಡು ಹಾಗೂ ಹೈಕೋರ್ಟ್ ಆದೇಶ ಕೊಟ್ಟಿರುವ ಪ್ರತಿಯನ್ನು ಇಟ್ಟುಕೊಂಡು ಏನೆಲ್ಲ ಮಾಡಬಹುದು ಎಂಬ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದರು. ಖ್ಯಾತ ಸುಗಮ ಸಂಗೀತಗಾರ ಶಿವಮೊಗ್ಗ ಸುಬ್ಬಣ್ಣ ನಮ್ಮನ್ನು ಅಗಲಿರುವುದು ಬಹಳ ದುಃಖಕರ ಸಂಗತಿ. ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದರು. ಹಲವು ಪ್ರಶಸ್ತಿಗಳಿಗೆ ಭಾಜನರಾದವರು. ಕನ್ನಡದ ಮಹಾನ್ ಕಲಾವಿದರನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ-ವಿಧಾನ ಮಾಡಲಾಗುತ್ತದೆ ಎಂದರು.