ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ವೇಳೆ ಬೃಹತ್ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ ಮತ್ತು ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಕೇಂದ್ರವು ರಾಜ್ಯಗಳಿಗೆ ಹೇಳಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಕೈಗೊಳ್ಳಿ ಮತ್ತು ತಿಂಗಳ ಅವಧಿಯ ಅಭಿಯಾನ ಕೈಗೊಂಡು, ಸ್ವಯಂಪ್ರೇರಿತರಾಗಿ ನಾಗರಿಕರು ಈ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯವು ತಿಳಿಸಿದೆ.
ಭಾರತದಲ್ಲಿ 16,561 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು 4,42,23,557 ಕ್ಕೆ ತಲುಪಿದೆ, ಆದರೆ ಸಕ್ರಿಯ ಪ್ರಕರಣಗಳು 1,23,535 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.










