ತೀವ್ರ ವಿರೋಧ – ಪರೇಶ್ ಮೇಸ್ತಾ ಕೊಲೆ ಆರೋಪಿಗೆ ವಕ್ಫ್ ಬೋರ್ಡ್‍ನಿಂದ ನೀಡಲಾಗಿದ್ದ ಸ್ಥಾನ ರದ್ದು…

68
firstsuddi

ಕಾರವಾರ : ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಆರೋಪಿ ಅಜಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ನ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ತಡೆ ಹಿಡಿದಿದೆ.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಇದೇ ಆಗಸ್ಟ್ 1ರಂದು ಮಾಡಿದ್ದ ಆದೇಶದಲ್ಲಿ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಎ1 ಆರೋಪಿಯಾಗಿದ್ದ ಅಜಾದ್ ಅಣ್ಣಿಗೇರಿಗೆ ಉತ್ತರ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ ನೀಡಿತ್ತು. ರಾಜ್ಯ ಸರ್ಕಾರವು ತನ್ನ ಆಗಸ್ಟ್ 1, 2022 ರ ಆದೇಶದಲ್ಲಿ (KSBV/ADM/CR/45/2010-11) ಮೂರು ವರ್ಷಗಳ ಅವಧಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಒಬ್ಬ ಅಧ್ಯಕ್ಷರು, ಆರು ಉಪಾಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿತ್ತು. ಸರ್ಕಾರದ ಈ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಅಲ್ಲದೆ, ಬಿಜೆಪಿ ಸರ್ಕಾರದ ವಿರುದ್ಧ ಪಕ್ಷದ ಮುಖಂಡರೇ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದರು. ಈ ಹಿನ್ನಲೆ ರಾಜ್ಯ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿನ್ನೆ ಈ ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ.