ಬೆಳಗಾವಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭ ನವ್ಯಶ್ರೀ ಪ್ರತಿಭಟನೆಗೆ ಮುಂದಾಗಿದ್ದರು. ಅತ್ಯಾಚಾರ ಆರೋಪ ಎದುರಿಸುತ್ತಿರುವ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಸಚಿವ ಗೋವಿಂದ ಕಾರಜೋಳ ಎದುರೇ ಪ್ರತಿಭಟನೆ ನಡೆಸಲು ನವ್ಯಶ್ರೀ ನಿರ್ಧರಿಸಿದ್ದರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಎಪಿಎಂಸಿ ಠಾಣೆ ಪೊಲೀಸರು ಬೆಳಗಾವಿ ರಾಮದೇವ ಹೋಟೆಲ್ ಬಳಿಯೇ ವಶಕ್ಕೆ ಪಡೆದು ಬೆಳಗಾವಿ ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ.










