ಪ್ಯಾರಿಸ್ : ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅನ್ನು ಫಿಫಾ ಅಮಾನತುಗೊಳಿಸಿದೆ. ಭಾರತ ಫುಟ್‌ಬಾಲ್ ಫೆಡರೇಶನ್ ನಲ್ಲಿ ಮೂರನೇ ವ್ಯಕ್ತಿಗಳ ಅನಗತ್ಯ ಹಸ್ತಕ್ಷೇಪ ಹಾಗೂ ಫಿಫಾ ನಿಯಮಗಳ ಉಲ್ಲಂಘನೆ ಆದ ಕಾರಣ ಈ ನಿರ್ಧಾರವನ್ನು ಫಿಫಾ ತೆಗೆದುಕೊಂಡಿದೆ.
2020ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಪಂದ್ಯಾವಳಿಯನ್ನು ಕೋವಿಡ್ ಹಿನ್ನೆಲೆ ರದ್ದುಗೊಳಿಸಲಾಗಿತ್ತು. ಈ ಬಾರಿ ಅಕ್ಟೋಬರ್ 11 ರಿಂದ 30ರ ವರೆಗೆ ಭಾರತದಲ್ಲಿ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫಿಫಾ ಎಐಎಫ್ಎಫ್ ಅನ್ನು ಅಮಾನತುಗೊಳಿಸಿದೆ.
ಫಿಫಾ ಅಮಾನತುಗೊಳಿಸಿದ ವಿಚಾರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದೆ. ನ್ಯಾ.ಚಂದ್ರಚೂಡ್ ನೇತೃತ್ವದ ಪೀಠ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.










