ಎರಡು ವಿಮಾನಗಳ ನಡುವೆ ಡಿಕ್ಕಿ ; ಹಲವು ಮಂದಿ ಸಾವು…

49
firstsuddi

ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಿನ್ನೆ ಎರಡು ವಿಮಾನಗಳು ಡಿಕ್ಕಿ ಹೊಡೆದಿದ್ದು, ಸಾಕಷ್ಟು ಸಾವು-ನೋವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ವಿಮಾನಗಳು ವ್ಯಾಟ್ಸನ್ ವಿಲ್ಲೆ ನಗರದ ಸ್ಥಳೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಡಿಕ್ಕಿ ಹೊಡೆದಿವೆ. ಅಮೆರಿಕದ ವ್ಯಾಟ್ಸನ್‌ವಿಲ್ಲೆ ಮುನ್ಸಿಪಲ್ ಏರ್‌ಪೋರ್ಟ್‌ನಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಅಪಘಾತದ ಸಮಯದಲ್ಲಿ ಅವಳಿ-ಎಂಜಿನ್ ಸೆಸ್ನಾ 340ನಲ್ಲಿ ಇಬ್ಬರು ಪ್ರಯಾಣಿಕರಿದ್ದರು. ಒಂದೇ ಇಂಜಿನ್ ಸೆಸ್ನಾ 152ನಲ್ಲಿ ಪೈಲಟ್ ಮಾತ್ರ ಇದ್ದರು. ಈ ಎರಡು ವಿಮಾನಗಳ ಅಪಘಾತದಿಂದಾಗಿ ಅನೇಕ ಸಾವು-ನೋವುಗಳು ವರದಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಈ ಅವಘಡದಲ್ಲಿ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.