ಲಾರಿಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ ಮೂವರು ಸಾವು…

73
firstsuddi

ತುಮಕೂರು : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತಂದೆ ಅವಿನಾಶ್(28), ಹಾಗೂ ಇಬ್ಬರು ಮಕ್ಕಳಾದ ಪ್ರಣತಿ(5), ಸೌಖ್ಯ(3) ಮೃತಪಟ್ಟಿದ್ದಾರೆ.

ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಗಾಯಾಳು ಬಾಲಕಿಯನ್ನು ಜಿಲ್ಲೆಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.