ವೈದ್ಯರ ಮೇಲೆ ಹಲ್ಲೆ ಮಾಡಿದ ಮಿಜೋರಾಂ ಸಿಎಂ ಮಗಳು – ಕ್ಷಮೆಯಾಚಿಸಿದ ಮುಖ್ಯಮಂತ್ರಿ.

56
firstsuddi

ಐಜ್ವಾಲ್ : ವೈದ್ಯರೊಬ್ಬರ ಮೇಲೆ ಮಿಜೋರಾಂ ಮುಖ್ಯಮಂತ್ರಿಯ ಪುತ್ರಿ ಹಲ್ಲೆ ಮಾಡಿರುವ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಗಳ ವರ್ತನೆಯಿಂದ ಮುಜುಗರಕ್ಕೀಡಾದ ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ ತಮ್ಮ ಮಗಳು ಮಿಲಾರಿ ಚಾಂಗ್ಟೆ ಪರವಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಅಪಾಯಿಂಟ್ ಮೆಂಟ್ ಇಲ್ಲದೆ ವೈದ್ಯರು ಮಿಲಾರಿ ಚಾಂಗ್ಟೆಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಮಿಲಾರಿ ಚಾಂಗ್ಟೆ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ಖಂಡಿಸಿ 800ಕ್ಕೂ ಹೆಚ್ಚು ವೈದ್ಯರು ಪ್ರತಿಭಟನೆ ನಡೆಸಿದ್ದರು. ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಮಿಜೋರಾಂ ವಿಭಾಗದ ವೈದ್ಯರು ಕೂಡಾ ಘಟನೆಯನ್ನು ಖಂಡಿಸಿ ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದರು.

ವೈದ್ಯರ ಬಗ್ಗೆ ನಮ್ಮ ಮಗಳ ವರ್ತನೆಯನ್ನು ಸಮರ್ಥಿಸಲು ಯಾವುದೇ ಕಾರಣವೂ ಇಲ್ಲ. ನಾವು ವೈದ್ಯರು ಮತ್ತು ಸಾರ್ವಜನಿಕರ ಬಳಿ ಕ್ಷಮೆ ಕೇಳುತ್ತೇವೆ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ ಇನ್ ಸ್ಟಾಗ್ರಾಂನಲ್ಲಿ ನಲ್ಲಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.