ನಾಗರಹಾವು ಕಡಿತದಿಂದ ಸ್ನೇಕ್ ಲೋಕೇಶ್ ಸಾವು…

85
firstsuddi

ಬೆಂಗಳೂರು : ನಾಗರಹಾವು ಕಡಿತದಿಂದ ಉರಗ ರಕ್ಷಕ, ಸ್ನೇಕ್ ಲೋಕೇಶ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಆ.17 ರಂದು ಹಾವು ರಕ್ಷಣೆ ಮಾಡಲು ಲೋಕೇಶ್ ತೆರಳಿದ್ದರು. ಈ ವೇಳೆ ಅವರ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ತಕ್ಷಣವೇ ಅವರಿಗೆ ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಬೆಂಗಳೂರಿನ ಮಣಿಪಾಲ್ ಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಇಲ್ಲಿಯವರೆಗೂ ಸ್ನೇಕ್ ಲೋಕೇಶ್ ಅವರು ಸುಮಾರು 35 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಉರಗಗಳು, ಪ್ರಾಣಿ, ಪಕ್ಷಿಗಳನ್ನು ರಕ್ಷಣೆ ಮಾಡಿದ್ದಾರೆ.