ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‍ನ ಜಿಲ್ಲಾಧ್ಯಕ್ಷರಾಗಿ ಸಿ.ಪಿ.ಸುರೇಶ್ ಆಯ್ಕೆ…

66
firstsuddi

ಚಿಕ್ಕಮಗಳೂರು : ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‍ನ ಜಿಲ್ಲಾಧ್ಯಕ್ಷರಾಗಿ ಸಿ.ಪಿ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹ ಸಂಯೋಜಕರಾಗಿ ಕೆ.ಎಸ್.ಸತೀಶ್, ಕಾರ್ಯದರ್ಶಿಯಾಗಿ ವಿ.ಟಿ.ನಿಂಗರಾಜು, ಖಜಾಂಚಿಯಾಗಿ ನಾಗೇಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಬಿ.ಸಿ.ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.

ನಗರದ ಲಯನ್ಸ್ ಭವನದಲ್ಲಿ ಆ.26 ರಂದು ಸಂಜೆ 6 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ. ಸಿ.ಪಿ.ಸುರೇಶ್ ಅವರು ಸತತ ಮೂರು ಬಾರಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.