ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿರುವ ಸೋನಿಯಾ ಗಾಂಧಿ – ರಾಹುಲ್, ಪ್ರಿಯಾಂಕಾ ಸಾಥ್.

49
firstsuddi

ನವದೆಹಲಿ : ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿದೇಶಕ್ಕೆ ತೆರಳಲಿದ್ದಾರೆ. ಈ ವೇಳೆ ತಾಯಿಯ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಜೊತೆಗಿರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಆದರೆ ಪ್ರಯಾಣದ ದಿನಾಂಕ ಮತ್ತು ಸೋನಿಯಾ ಗಾಂಧಿ ಭೇಟಿ ನೀಡುವ ಸ್ಥಳದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಇನ್ನು ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಅವರು ಮಾತನಾಡಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಕಾಂಗ್ರೆಸ್ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ‘ಭಾರತ್ ಜೋಡೋ ಯಾತ್ರೆ’ಗೆ ತಯಾರಿ ನಡೆಸುತ್ತಿದ್ದು, ಸೆಪ್ಟೆಂಬರ್ 7 ರಿಂದ ಆರಂಭವಾಗಲಿದೆ. ಈ ವೇಳೆಯೇ ಸೋನಿಯಾ ಅವರು ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.