ಈದ್ಗಾ ಮೈದಾನ ವಿವಾದ : ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಮಧ್ಯಂತರ ಆದೇಶ…

46
firstsuddi

ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದಾಗಿದೆ ಎಂದು ಬಿಬಿಎಂಪಿ ಘೋಷಣೆ ಮಾಡಿದ್ದನ್ನು ಪ್ರಶ್ನಿಸಿ ವಕ್ಫ್ ಮಂಡಳಿ ಹೈಕೋರ್ಟ್ ಗೆ  ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ, ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೇಳಿದೆ.

ಚಾಮರಾಜಪೇಟೆ ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಬಳಸಬೇಕು. ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಬಳಸಲು ಅನುಮತಿ ಇದೆ. ಆದರೆ ಶುಕ್ರವಾರದ ಪ್ರಾರ್ಥನೆಗೆ, ಗಣೇಶ ಪ್ರತಿಷ್ಠಾಪಿಸಲು ಅವಕಾಶವಿಲ್ಲ. ಮೊದಲು ಇದ್ದಂತೆ ಯಥಾಸ್ಥಿತಿ ಕಾಪಾಡಿ ಅಂತಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.