ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ – ರಾಹುಲ್ ಗಾಂಧಿ ಶ್ಲಾಘನೆ…

117
firstsuddi

ನವದೆಹಲಿ : ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಆಟಗಾರರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಎಂತಹ ರೋಚಕ ಪಂದ್ಯ! ಟೀಂ ಇಂಡಿಯಾ ಅದ್ಭುತವಾಗಿ ಆಡಿದೆ. ದೇಶವನ್ನು ಹೇಗೆ ಪ್ರೇರೇಪಿಸುತ್ತದೆ ಮತ್ತು ಒಗ್ಗೂಡಿಸುತ್ತದೆ ಎಂಬುವುದೇ ಕ್ರೀಡೆಯ ಸೌಂದರ್ಯ. ನನಗೆ ಹೆಮ್ಮೆಯ ಜೊತೆಗೆ ಬಹಳ ಸಂತೋಷವಾಗುತ್ತಿದೆ ಎಂದಿದ್ದಾರೆ.

ಹುರ್ರೇ! ನಾವು ಗೆದ್ದಿದ್ದೇವೆ. ಅದ್ಬುತ ಪ್ರದರ್ಶನಕ್ಕಾಗಿ ಮತ್ತು ಜಯಗಳಿಸಿದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು. ಉತ್ತಮವಾಗಿ ಆಡಿದ್ದೀರಿ ಬ್ಲೂ ಬಾಯ್ಸ್ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಾಕ್ ತಂಡವು ನಿಗದಿತ 19.5 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದದ ಟೀಂ ಇಂಡಿಯಾ 19.4 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸುವ ಮೂಲಕ ರೋಚಕ ಜಯ ದಾಖಲಿಸಿತು. ಈ ಮೂಲಕ ಟಿ20 ವಿಶ್ವಕಪ್ನಲ್ಲಾದ ಸೋಲಿಗೆ ಭಾರತ ತಂಡ ಸೇಡನ್ನು ತೀರಿಸಿಕೊಂಡಿದೆ.