ರಾಮನಗರ : ಭಾರಿ ಮಳೆಗೆ ಮರ ಬಿದ್ದು ವ್ಯಕ್ತಿ ಸಾವು…

66
firstsuddi

ರಾಮನಗರ : ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆ ಆರ್ಭಟಕ್ಕೆ ಬಿಡದಿ ಪುರಸಭೆಯ ವ್ಯಾಪ್ತಿಯ ತೊರೆದೊಡ್ಡಿಯಲ್ಲಿ ಬೃಹತ್ ಆಲದಮರ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಬೋರೆಗೌಡ (50) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಕನಕಪುರ ರಸ್ತೆಯಲ್ಲಿನ ಗೌಡಯನದೊಡ್ಡಿ ಬಳಿ ಮಳೆಯಿಂದ ಭರ್ತಿಯಾದ ಅರ್ಕಾವತಿ ನದಿ ನೀರಲ್ಲಿ ಹಸುವೊಂದು ತೇಲಿ ಹೋಗಿರುವ ಬಗ್ಗೆ ವರದಿಯಾಗಿದೆ.

ರಾಮನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಹೆಚ್.ಡಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಇಂದು ಪರಿಸ್ಥಿತಿ ಪರಿಶೀಲನೆಗೆ ಸಿಎಂ ಬೊಮ್ಮಾಯಿ ಮತ್ತು ಸಚಿವ ಅಶ್ವತ್ಥ್ ನಾರಾಯಣ ಸ್ಥಳಕ್ಕೆ ಆಗಮಿಸುತ್ತಿದ್ದಾರೆ.