ಪಾಕಿಸ್ತಾನದಲ್ಲಿ ಭೀಕರ ಪ್ರವಾಹ – 1000ಕ್ಕೂ ಹೆಚ್ಚು ಮಂದಿ ಸಾವು…

47
firstsuddi

ಇಸ್ಲಮಾಬಾದ್ : ಪಾಕಿಸ್ತಾನವು ತನ್ನ ಇತಿಹಾಸದಲ್ಲಿಯೇ ಅತ್ಯಂತ ಭೀಕರ ಪ್ರವಾಹವನ್ನು ಎದುರಿಸುತ್ತಿದೆ. ಈ ಪ್ರವಾಹದಲ್ಲಿ ಸುಮಾರು 1000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಕೃಷಿ ಭೂಮಿ ಮತ್ತು ಮೂಲಸೌಕರ್ಯಗಳ ಮೇಲೂ ಪರಿಣಾಮ ಬೀರಿದೆ.

ಜೂನ್ 14 ರಿಂದ ಮಳೆ ಮತ್ತು ಪ್ರವಾಹದಿಂದ ಕನಿಷ್ಠ 1,033 ಜನರು ಸಾವನ್ನಪ್ಪಿದ್ದಾರೆ ಮತ್ತು 1,527 ಜನರು ಗಾಯಗೊಂಡಿದ್ದಾರೆ. ಬಲೂಚಿಸ್ತಾನದಲ್ಲಿ 4, ಗಿಲ್ಗಿಟ್ ಬಾಲ್ಟಿಸ್ತಾನ್ ನಲ್ಲಿ 6, ಖೈಬರ್ ಪಖ್ತುಂಖ್ವಾದಲ್ಲಿ 31 ಮತ್ತು ಸಿಂಧ್ ನಲ್ಲಿ 76 ಮಂದಿ ಸಾವನ್ನಪ್ಪಿದ್ದಾರೆ. ಜೂನ್ 14ರಿಂದ 3,451.5 ಕಿಮೀ ರಸ್ತೆ ಹಾನಿಗೊಳಗಾಗಿದೆ ಮತ್ತು 149 ಸೇತುವೆಗಳು ಕುಸಿದಿವೆ. ಒಟ್ಟು 9,49,858 ಮನೆಗಳು ಭಾಗಶಃ ನಾಶವಾಗಿವೆ. ಒಟ್ಟು 6,62,446 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ.

ನಿನ್ನೆ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಪ್ರವಾಹ ಸಂಬಂಧಿತ ಘಟನೆಗಳಲ್ಲಿ 119 ಜನರು ಸಾವನ್ನಪ್ಪಿದ್ದಾರೆ. ಜೂನ್ 14 ರಿಂದ ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಹದಗೆಟ್ಟಿದೆ. ಈ ಪ್ರವಾಹ 30 ಮಿಲಿಯನ್ಗಿಂತಲೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ.

ಮಳೆ, ಪ್ರವಾಹದಲ್ಲಿ ಸಿಲುಕಿದ 51,275 ಮಂದಿಯನ್ನು ರಕ್ಷಿಸಲಾಗಿದೆ. 498,442 ಮಂದಿಯನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.