ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ…

59
firstsuddi

ಹುಬ್ಬಳ್ಳಿ : ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಹಿಂದು ಸಂಘಟನೆಗಳು ಇಂದು ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಇತ್ತ ತಡರಾತ್ರಿ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಮಧ್ಯಾಹ್ನ 12 ಗಂಟೆಗೆ ಮೂರುಸಾವಿರ ಮಠದಿಂದ ಮೂಲಕ ಗಣೇಶ ಮೂರ್ತಿ ತೆಗೆದುಕೊಂಡು ಬಂದು ಪ್ರತಿಷ್ಟಾಪಿಸುವ ಯೋಜನೆ ಇತ್ತು. ಆದರೆ ಅಂಜುಮನ್ ಸಂಸ್ಥೆ ಸುಪ್ರೀಂ ಮೊರೆ ಕಾರಣದಿಂದ ಸಮಯ ಬದಲಿಸಿ ಬೆಳಗ್ಗೆ 7:30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. ಉತ್ಸವ ಸಮಿತಿ ಅಧ್ಯಕ್ಷ ಸಂಜೀವ್ ಬಡೆಸ್ಕರ್ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಯಿತು.

ಈ ಬಾರಿ ಉತ್ಸವ ಮೂರ್ತಿ ಬಿಟ್ಟು, ಸಣ್ಣ ಗಣಪತಿ ಮೂರ್ತಿ ಪ್ರತಿಷ್ಟಾಪಿಸಲಾಗಿದೆ. ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.