ನಿರ್ದೇಶಕಿ ಲೀನಾ ಮಣಿಮೇಕಲೈಗೆ ಸಮನ್ಸ್ ನೀಡಿದ ದೆಹಲಿ ಕೋರ್ಟ್.

52
firstsuddi

ನಿರ್ದೇಶಕಿ ಲೀನಾ ಮಣಿಮೇಕಲೈ ಅವರು ನಿರ್ದೇಶನ ಮಾಡಿದ ‘ಕಾಳಿ’ ಡಾಕ್ಯುಮೆಂಟರಿ ಹಲವು ವಿವಾದಗಳನ್ನು ಸೃಷ್ಟಿಸಿದೆ. ತಮ್ಮ ಡಾಕ್ಯುಮೆಂಟರಿಯ ಪೋಸ್ಟರ್ ನಲ್ಲಿ ಲೀನಾ ಕಾಳಿಯನ್ನು ಅವಮಾನಿಸಲಾಗಿದೆ ಎನ್ನುವ ಕಾರಣಕ್ಕಾಗಿ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳನ್ನು ಆಧರಿಸಿ ದೆಹಲಿಯ ತೀಸ್ ಹಜಾರಿ ಕೋರ್ಟ್ ನಿಂದ ಸಮನ್ಸ್ ಜಾರಿ ಮಾಡಲಾಗಿದೆ. ನವೆಂಬರ್ 1 ರಂದು ಲೀನಾ ಮಣಿಮೇಕಲೈ ವಿಚಾರಣೆ ಎದುರಿಸಬೇಕಿದೆ.

ಜುಲೈ 4ರಂದು ಲೀನಾ ಮಣಿಮೇಕಲೈ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ‘ಕಾಳಿ’ ಪೋಸ್ಟರ್ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟರ್ ನಲ್ಲಿ ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತರ ಧ್ವಜ ಹಿಡಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದ್ದರು. ಈ ಕಾರಣಕ್ಕಾಗಿ ಅವರ ಮೇಲೆ ಸಾಕಷ್ಟು ದೂರುಗಳನ್ನು ಸಲ್ಲಿಸಲಾಗಿತ್ತು.

ದೆಹಲಿ ಮಾತ್ರವಲ್ಲದೇ ಹಲವು ಕಡೆಗಳಲ್ಲಿ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಕೇಸ್ ಗಳು ದಾಖಲಾಗಿವೆ. ಈ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆಯೇ ಟೊರಾಂಟೋ ಆಗಾ ಮ್ಯೂಸಿಯಮ್ ನಲ್ಲಿ ಬಿತ್ತರವಾದ ವಿವಾದಿತ ಕಾಳಿ ಪೋಸ್ಟರ್ ಅನ್ನು ತೆಗೆದುಹಾಕುವಂತೆ ಕೆನಡಾದ ಇಂಡಿಯನ್ ಹೈ ಕಮಿಷನ್ ಆದೇಶಿಸಿತ್ತು.