ಪೋಕ್ಸೋ ಕೇಸ್ ; ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ…

48
firstsuddi

ಚಿತ್ರದುರ್ಗ : ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ನಿನ್ನೆ ರಾತ್ರಿ ಮಠದಲ್ಲೇ ಶ್ರೀಗಳನ್ನು ವಿಚಾರಣೆ ನಡೆಸಿ ಬಂಧಿಸಿದ್ದ ಪೊಲೀಸರು, ಮಧ್ಯರಾತ್ರಿ ಮೆಡಿಕಲ್ ಚೆಕಪ್ ಬಳಿಕ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶೆ ಕೋಮಲಾ ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಹೀಗಾಗಿ ಮಧ್ಯರಾತ್ರಿ 2.50ರ ಸುಮಾರಿಗೆ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಜೈಲಿಗೆ ರವಾನಿಸಲಾಗಿದೆ.

ಇದಕ್ಕೂ ಮುನ್ನ ಶರಣರ ಪರ ವಕೀಲರು ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿದ್ದಾರೆ.