ಭುವನೇಶ್ವರ : ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣಾ ಕಾಯ್ದೆ) ನ್ಯಾಯಾಲಯದ ನ್ಯಾಯಾಧೀಶ ಸುಭಾಶ್ ಕುಮಾರ್ ಬಿಹಾರಿ ಅವರ ಮೃತದೇಹ ಒಡಿಶಾದ ಕಟಕ್ ನಗರದ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಭಾಶ್ ಕುಮಾರ್ ಬಿಹಾರಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ತೋರುತ್ತದೆ. ಘಟನೆ ನಡೆದಾಗ ನ್ಯಾಯಾಧೀಶರ ಪತ್ನಿ ಮನೆಯಲ್ಲಿರಲಿಲ್ಲ. ಮಗಳು ಶಾಲೆಗೆ ಹೋಗಿದ್ದರು. ಕಳೆದೆರಡು ದಿನಗಳಿಂದ ರಜೆಯಲ್ಲಿದ್ದ ನ್ಯಾಯಾಧೀಶರು ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕಿತ್ತು ಎಂದು ಕಟಕ್ ನ ಸಹಾಯಕ ಪೊಲೀಸ್ ಕಮಿಷನರ್ ತಪಸ್ ಚಂದ್ರ ಪ್ರಧಾನ್ ತಿಳಿಸಿದ್ದಾರೆ.
ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










