ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು ನ್ಯಾಯಾಲಯ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಿನ್ನೆ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮುರುಘಾ ಶರಣರನ್ನು ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯ ಮುರುಘಾ ಶ್ರೀಗಳಿಗೆ ಸೆ.14ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಮುರುಘಾ ಶ್ರೀ ವಿರುದ್ಧ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ಏಳು ದಿನದ ಬಳಿಕ ಮುರುಘಾ ಶ್ರೀಯನ್ನು ಪೊಲೀಸರು ಬಂಧಿಸಿದ್ದರು.










