ರಿಷಿ ಸುನಕ್‍ಗೆ ತಪ್ಪಿದ ಪ್ರಧಾನಿ ಹುದ್ದೆ – ಬ್ರಿಟನ್ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ…

64
firstsuddi

ಲಂಡನ್ : ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರು ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನಿ ಹುದ್ದೆಗಾಗಿ ರಿಷಿ ಸುನಕ್ ಹಾಗೂ ಲಿಜ್ ಟ್ರಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಲಿಜ್ ಟ್ರಸ್ 81,326 ಮತಗಳನ್ನು ಪಡೆದು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಟನ್‍ನ ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ. ರಿಷಿ ಸುನಕ್ 60,399 ಮತಗಳನ್ನು ಪಡೆದು ಸೋಲು ಅನುಭವಿಸಿದರು.

ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7 ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿ ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಜಾನ್ಸನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು. ಇದೀಗ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ.

ರಿಷಿ ಸುನಕ್ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಅಳಿಯ. ಬ್ರಿಟನ್ ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು. ಹಣಕಾಸು ಸಚಿವರಾಗಿ ಬೋರಿಸ್ ಜಾನ್ಸನ್ ಸರ್ಕಾರದಲ್ಲಿ ರಿಷಿ ಸುನಕ್ ಕಾರ್ಯನಿರ್ವಹಿಸಿದ್ದರು.