ಬೆಂಗಳೂರು : ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಆಗಮಿಸಿದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. 200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 22 ಕಡೆಗಳಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಓಲ್ಡ್ ಏರ್ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್ ಪೋರ್ಟ್ ರೋಡ್ ಸೇರಿದಂತೆ 22 ಕಡೆ ದಾಳಿ ನಡೆದಿದೆ.










