ಬೆಂಗಳೂರು: ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಭಾನುವಾರ (ಸೆ. 11) ಕ್ಕೆ ಮುಂದೂಡಿಕೆಯಾಗಿದೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮುನಿರತ್ನ ಅವರು, ಕತ್ತಿಯವರು ನಮ್ಮನ್ನೆಲ್ಲ ಅಗಲಿದ್ದಾರೆ. ನಾವೆಲ್ಲ ಶೋಕದಲ್ಲಿದೀವಿ, ರಾಜ್ಯದಲ್ಲಿ ಶೋಕಾಚರಣೆ ಇದೆ. ಈ ಕಾರಣದಿಂದ ನಾಳೆ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ನಿರ್ಧರಿಸಿದ್ದೇವೆ. ಜನೋತ್ಸವಕ್ಕೆ ಬರುವ ಕಾರ್ಯಕರ್ತರು ಮುಖಂಡರು ಭಾನುವಾರ ಬರಬೇಕಾಗಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಉಮೇಶ್ ಕತ್ತಿ ನಿಧನಕ್ಕೆ 3 ದಿನ ಶೋಕಾಚರಣೆ ನಡೆಸಲು ಸರ್ಕಾರ ತೀರ್ಮಾನಿಸಿದೆ.










