ಪಾಂಡವಪುರ ಮಾಜಿ ಶಾಸಕ ಕೆ.ಕೆಂಪೇಗೌಡ ವಿಧಿವಶ…

61
firstsuddi

ಮಂಡ್ಯ: ಪಾಂಡವಪುರದ ಮಾಜಿ ಶಾಸಕ ಕೆ.ಕೆಂಪೇಗೌಡ(96) ಅವರು ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 3 ರಿಂದ 4 ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವ್ಯವಸಾಯೋತ್ಪನ್ನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಕೆಂಪೇಗೌಡರು, 1983ರ ವಿಧಾನಸಭೆ ಚುನಾವಣೆಯಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1985 ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಪುನರಾಯ್ಕೆಯಾಗಿದ್ದರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು 1999ರಲ್ಲಿ ಮೂರನೇ ಬಾರಿಗೆ ಶಾಸಕರಾಗಿದ್ದರು.