ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ದಿನಾಂಕವನ್ನು ಮತ್ತೆ ಬದಲಾಯಿಸಲಾಗಿದೆ. ಭಾನುವಾರ(ಸೆ.11)ಕ್ಕೆ ನಿಗದಿ ಮಾಡಿದ್ದ ದಿನಾಂಕವನ್ನು ಶನಿವಾರ((ಸೆ.10)ಕ್ಕೆ ಮರುನಿಗದಿಗೊಳಿಸಲಾಗಿದೆ.
ಸಚಿವ ಉಮೇಶ್ ಕತ್ತಿಯವರ ನಿಧನದ ಹಿನ್ನಲೆಯಲ್ಲಿ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆದರೆ ಇದೀಗ ಮತ್ತೆ ನಿರ್ಧಾರ ಬದಲಿಸಿರುವ ರಾಜ್ಯ ಬಿಜೆಪಿ ನಾಯಕರು ಸಮಾವೇಶವನ್ನು ಭಾನುವಾರದ ಬದಲು ಶನಿವಾರವೇ ನಡೆಸುವುದಾಗಿ ತಿಳಿಸಿದ್ದಾರೆ.










