ಸಮವಸ್ತ್ರದಲ್ಲೇ ಮಲ ವಿಸರ್ಜನೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಬಿಸಿನೀರು ಎರಚಿ ವಿಕೃತಿ ಮೆರೆದ ಶಿಕ್ಷಕ!

65
firstsuddi

ರಾಯಚೂರು : ವಿದ್ಯಾರ್ಥಿಯೊಬ್ಬ ಶಾಲಾ ಸಮವಸ್ತ್ರದಲ್ಲೇ ಮಲ ವಿಸರ್ಜನೆ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಬಾಲಕನ ಮೇಲೆ ಬಿಸಿನೀರು ಎರಚಿ ವಿಕೃತಿ ಮೆರೆದಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರು ಶ್ರೀಘನಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ತರಗತಿಯಲ್ಲಿ 2ನೇ ತರಗತಿ ವಿದ್ಯಾರ್ಥಿ ಅಖಿತ್ (8)  ಶಾಲಾ ಸಮವಸ್ತ್ರದಲ್ಲೇ ಮಲ ವಿಸರ್ಜನೆ ಮಾಡಿಕೊಂಡಿದ್ದಾನೆ. ಇದರಿಂದ ಗರಂ ಆದ ಶಿಕ್ಷಕ ಹುಲಿಗೆಪ್ಪ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರಚಿದ್ದಾರೆ. ಬಿಸಿನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹದ ಶೇ 40% ರಷ್ಟು ಭಾಗ ಬೆಂದು ಗಂಭೀರ ಗಾಯಗಳಾಗಿವೆ. ಗಾಯಾಳು ಬಾಲಕನಿಗೆ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಸೆಪ್ಟಂಬರ್ 2ರಂದು ಘಟನೆ ನಡೆದಿದೆ. ಘಟನೆ ನಡೆದು ವಾರವಾದರೂ ಈವರೆಗೆ ಪ್ರಕರಣ ದಾಖಲಾಗಿಲ್ಲ. ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.