ಬೆಂಗಳೂರು : ಉಸಿರುಗಟ್ಟಿಸಿ ನಿವೃತ್ತ ಶಿಕ್ಷಕಿಯ ಹತ್ಯೆ…

64
firstsuddi

ಬೆಂಗಳೂರು : ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆಗೈದ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಸನ್ನ ಕುಮಾರಿ (60) ಕೊಲೆಯಾದ ನಿವೃತ್ತ ಶಿಕ್ಷಕಿ. ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಅವರು, ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ನೆಲೆಸಿದ್ದ ಇವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಕಳೆದ ರಾತ್ರಿ ಮನೆಗೆ ಬಂದಿದ್ದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಹತ್ಯೆ ಮಾಡಿ ನಂತರ ಚಿನ್ನಾಭರಣ ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರ ಠಾಣಾ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.