ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ…

45
firstsuddi

ಮೈಸೂರು : ತಮಿಳು ನಟ ವಿಶಾಲ್ ಅವರು ಇಂದು ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ.

ಈ ಹಿಂದೆ ಪುನೀತ್ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ನಟ, ಅಪ್ಪು ನಡೆಸುತ್ತಿದ್ದ ಆಶ್ರಮದ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿವಹಿಸಿಕೊಳ್ಳುವುದಾಗಿ ತಿಳಿಸಿದ್ದರು. ಇದೀಗ ಶಕ್ತಿಧಾಮಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಬಳಿಕ ತಮಿಳು ನಟ ವಿಶಾಲ್ ಮಾತನಾಡಿ, ನಾನು ಯಾವಾಗಲೂ ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಅದಕ್ಕೆ ರಾಜ್ ಕುಟುಂಬ ಅನುಮತಿ ನೀಡಬೇಕು. ಶಕ್ತಿಧಾಮ ನನಗೆ ದೇವಸ್ಥಾನ ಅನುಭವ ನೀಡಿದೆ ಎಂದು ಹೇಳಿದ್ದಾರೆ.