ಅ.16ಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಡಿ.ಕೆ.ಶಿವಕುಮಾರ್.

76
firstsuddi

ರಾಯಚೂರು : ಅಕ್ಟೋಬರ್ 16 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ಜೋಡೋ ಪೂರ್ವಭಾವಿ ಸಭೆಗೂ ಮುನ್ನ ಮಾತನಾಡಿದ ಅವರು, ನಾನು ಅಧ್ಯಕ್ಷನಾಗಿ 2 ವರ್ಷಗಳು ಪೂರ್ಣವಾಗುತ್ತಿದೆ. ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಕೊನೆಯ ದಿನದಂದು ನಿರ್ಧಾರವಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 22 ಮತ್ತು 23 ರಂದು ಭಾರತ ಜೋಡೋ ಪಾದಯಾತ್ರೆ ರಾಯಚೂರು ಜಿಲ್ಲೆಗೆ ಬರಲಿದೆ. ಕೃಷ್ಣ ನದಿಯಿಂದ ತುಂಗಭದ್ರಾ ನದಿವರೆಗೂ ಪಾದಯಾತ್ರೆ ನಡೆಸುವರು. ರಾಹುಲ್ ಗಾಂಧಿಯವರು ತಮ್ಮ ಕಬ್ಬಿಣದ ಕಾಲುಗಳ ಮೂಲಕ ಸಮಾಜದ ಎಲ್ಲ ಜನರನ್ನು ಜೋಡಿಸುವ ಕೆಲಸವನ್ನು ಸೂಜಿಯ ರೀತಿಯಲ್ಲಿ ಹೊಲಿಯುವ ಮೂಲಕ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಹಗರಣಗಳನ್ನು ಬಯಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ರು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಕಳೆದ 3 ವರ್ಷಗಳಿಂದಲೂ ಬಿಜೆಪಿಯವರು ಹಗರಣ ಬಯಲಿಗೆ ಎಳೆಯುವುದಾಗಿ ಹೇಳುತ್ತಿದ್ದಾರೆ. ಹಗರಣ ಬಯಲು ಮಾಡುವುದು ಸರ್ಕಾರದ ಕರ್ತವ್ಯ, ಇಂದಿನಿಂದಲೇ ಆ ಕೆಲಸ ಮಾಡಲಿ ಎಂದರು.

ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಫೋಟೋ ಇರಲಿಲ್ಲ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ನಾನು ನನ್ನ ಫೋಟೋವನ್ನು ಸಹ ಹಾಕ್ಬೇಡಿ ಅಂದಿದ್ದೆ. ಫೋಟೋನೇ ರಾಜಕೀಯ ಅಲ್ಲ, ಫೋಟೋ ಹಾಕದಿದ್ದರೇ ಏನಾಯ್ತು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು ಅವರ ಕೆಲಸ ಅವರು ಮಾಡುತ್ತಿದ್ದಾರೆ. ಅವರು ಬಂದಾಗ ಅವರ ಫೋಟೋ ಹಾಕ್ತಾರೆ ಎಂದು ಹೇಳಿದರು.