ಅಮಾನವೀಯ ಕೃತ್ಯ; ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಹಲ್ಲೆ…

50
firstsuddi

ಮುಂಬೈ : ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಲವಣ ಎಂಬ ಹಳ್ಳಿಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ನೂರಾರು ಜನರ ಸಮ್ಮುಖದಲ್ಲಿ ಕಿರಾಣಿ ಅಂಗಡಿವೊಂದರ ಮುಂದೆ ಕೋಲುಗಳಿಂದ ಥಳಿಸಲಾಗಿದೆ. ಅಮಾನುಷವಾಗಿ ಥಳಿತಕ್ಕೊಳಗಾಗಿರುವ ಸಾಧುಗಳು ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ಕರ್ನಾಟಕದ ಮೂಲಕ ಪಂಢರಪುರಕ್ಕೆ ಹೋಗುತ್ತಿದ್ದರು ಎಂದು ವರದಿಯಾಗಿದೆ.

ನಾವು ಯಾವುದೇ ದೂರು ಸ್ವೀಕರಿಸಿಲ್ಲ, ಆದರೆ ವೈರಲ್ ವಿಡಿಯೋ ಆಧಾರದ ಮೇಲೆ ಪ್ರಕರಣದ ಪರಿಶೀಲನೆ ನಡೆಸಲಾಗ್ತಿದೆ ಎಂದು ಸಾಂಗ್ಲಿ ಎಸ್ಪಿ ದೀಕ್ಷಿತ್ ಗೆಡಮ್ ತಿಳಿಸಿದ್ದಾರೆ.

ಸಾಧುಗಳ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ರಾಮ್ ಕದಂ, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಾಧುಗಳ ಮೇಲೆ ಇಂತಹ ಅಮಾನವೀಯ ಕೃತ್ಯ ಸಹಿಸುವುದಿಲ್ಲ ಎಂದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.