ಅಪ್ರಾಪ್ತ ಸೊಸೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಮಾವ.

60
firstsuddi

ದಕ್ಷಿಣ ಕನ್ನಡ : ಅಪ್ರಾಪ್ತ ಸೊಸೆಯ ಮೇಲೆ ಆಕೆಯ ಮಾವನೇ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿರುವ ಘಟನೆ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಕೊಂಬಾರಿನ ಮರುವಂಜೆಯ ನಿವಾಸಿ ರುಕ್ಮಯ್ಯ ಎಂಬಾತ ಸೊಸೆಯನ್ನು ಗರ್ಭಿಣಿಯನ್ನಾಗಿಸಿದ ಮಾವ. ಆರೋಪಿಯು ತನ್ನ ಸಂಬಂಧಿಯಾದ 17 ವರ್ಷದ ಬಾಲಕಿಯ ಮೇಲೆ ಕಳೆದ ಫೆಬ್ರವರಿ ತಿಂಗಳಿನಿಂದ ನಾಲ್ಕೈದು ಬಾರಿ ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ. ಆಶಾ ಕಾರ್ಯಕರ್ತೆಯೋರ್ವರು ಬಾಲಕಿಯ ಮನೆಗೆ ಭೇಟಿ ನೀಡಿದಾಗ ವಿಷಯ ಹೊರಬಂದಿದೆ.

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.