ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಚಾಲಕನ ಮನೆ ಧ್ವಂಸ…

66
firstsuddi

ಭೋಪಾಲ್ : ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿ ಶಾಲಾ ಬಸ್ ಚಾಲಕನ ಮನೆಯನ್ನು ನೆಲಸಮಗೊಳಿಸಲಾಗಿದೆ. ಅಧಿಕಾರಿಗಳ ನಿರ್ದೇಶನದ ಮೇರೆಗೆ ಭೋಪಾಲ್ ಜಿಲ್ಲಾಡಳಿತವು ಆರೋಪಿ ಚಾಲಕನ ಅಕ್ರಮ ಮನೆಯನ್ನು ನೆಲಸಮಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಗುರುವಾರ ಭೋಪಾಲ್ ನಲ್ಲಿ ಈ ಘಟನೆ ನಡೆದಾಗ ಬಸ್ ಚಾಲಕನ ಜೊತೆಗೆ ವಾಹನದೊಳಗೆ ಮಹಿಳಾ ಅಟೆಂಡರ್ ಕೂಡ ಇದ್ದರು ಎಂದು ಬಾಲಕಿ ಪೋಷಕರು ತಿಳಿಸಿದ್ದು, ಅಟೆಂಡರ್ ಕೂಡ ಬಂಧನಕ್ಕೊಳಗಾಗಿದ್ದಾರೆ. ನಗರದ ಪ್ರಮುಖ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಬಾಲಕಿ ಬಸ್ಸಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ.

ಸಂತ್ರಸ್ತೆಯ ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 376-ಎಬಿ (12 ವರ್ಷದೊಳಗಿನ ಬಾಲಕಿಯ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಿಧಿ ಸಕ್ಸೇನಾ ಅವರು ತಿಳಿಸಿದ್ದಾರೆ.