ಬೆಂಗಳೂರು : ಸೆಪ್ಟೆಂಬರ್ 14 ರಂದು ನಡೆಯಲಿರುವ ಹಿಂದಿ ದಿವಸವನ್ನು ರಾಜ್ಯದಲ್ಲಿ ಆಚರಣೆ ಮಾಡದಂತೆ ವಿರೋಧಗಳು ಹೆಚ್ಚಾಗುತ್ತಿದೆ. ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಯಾವ ಭಾಷೆಯ ಕಲಿಕೆಯನ್ನು ವಿರೋಧಿಸುವುದಿಲ್ಲ. ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ. ಕೇಂದ್ರದ ಬಿಜೆಪಿ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಿ ಹಿಂದಿ ಭಾಷೆ ಹೆಸರಲ್ಲಿ ಆರ್ ಎಸ್ ಎಸ್ ಹಿಂದುತ್ವ ಹೇರಿಕೆ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಿ ದಿನ ಆಚರಣೆ ಮಾಡಬಾರದು ಎಂದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಪತ್ರವನ್ನು ಬರೆದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಹಿಂದಿ ದಿವಸ್ ಆಚರಣೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.










