ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಹಿನ್ನೆಲೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಬಿ.ಎಸ್.ಯಡಿಯುರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ ಸಾಮಾಜಿಕ ಹೋರಾಟಗಾರ ಅಬ್ರಹಾಂ ನೀಡಿದ್ದ ಖಾಸಗಿ ದೂರಿನಡಿಯಲ್ಲಿ ಪ್ರಕರಣ ದಾಖಲಾಗಲಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ರಾಮಲಿಂಗಂ ಕನ್ ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ.










