ದೆಹಲಿಯ ಇಡಿ ಕಚೇರಿಗೆ ಹಾಜರಾದ ಡಿಕೆಶಿ.

61
firstsuddi

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಜಾರಿ ನಿರ್ದೇಶನಾಲಯದ(ಇಡಿ) ಮುಂದೆ ಹಾಜರಾದರು.

ಕಳೆದ ವಾರ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಹೀಗಾಗಿ, ಇಂದು ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಗೆ ಹಾಜರಾಗಿದ್ದಾರೆ.

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇಡಿ ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ.

ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿ ಎಫ್ ಐಆರ್ ಅನ್ನು ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ನೋಟಿಸ್ ನೀಡಿತ್ತು. ಅದರ ಅನುಸಾರ ಡಿ. ಕೆ ಶಿವಕುಮಾರ್ ವಿಚಾರಣೆಯನ್ನು ಎದುರಿಸಲಿದ್ದಾರೆ. ವಿಶೇಷ ಅಂದರೆ ಹೆಚ್ಚುವರಿ ಎಫ್ ಐಆರ್ ನಲ್ಲಿ ಯಾವ ಆರೋಪ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.