ಬಾಲಿವುಡ್ ನ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ(58) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆಗಸ್ಟ್ 10ರಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ದೆಹಲಿ ಏಮ್ಸ್ಗೆ ಕರೆತರಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.
ರಾಜು ಶ್ರೀವಾಸ್ತವ ಅವರು ಬಾಜಿಗರ್, ಮೈನೆ ಪ್ಯಾರ್ ಕಿಯಾ, ಬಾಂಬೆ ಟು ಗೋವಾ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಕಾಣಿಸಿಕೊಂಡಿದ್ದಾರೆ.










