ಮಂಗಳೂರು : ನಗರದಲ್ಲಿನ ಪಿಎಫ್ಐ ಹಾಗೂ ಎಸ್ಡಿಪಿಐ ಜಿಲ್ಲಾ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ. ಬೆಳಗ್ಗಿನ ಜಾವ ಸುಮಾರು 3:30ರ ವೇಳೆಗೆ ದಾಳಿ ನಡೆದಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿಗಳು ಸೇರಿದಂತೆ ನಗರದ 8 ಕಡೆ ಈ ಸಂಘಟನೆಗಳ ಮುಖಂಡರ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಎನ್ಐಎ ದಾಳಿ ಖಂಡಿಸಿ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ದಾಳಿ ನಡೆದ ಸ್ಥಳಗಳಲ್ಲಿ ಅರೆಮೀಸಲು ಪಡೆಗಳನ್ನು ನೇಮಿಸಲಾಗಿದೆ.










