ಮಂಗಳೂರಿನಲ್ಲಿ ಮೂವರು ಪಿಎಫ್ಐ ಮುಖಂಡರು ವಶಕ್ಕೆ…

55
firstsuddi

ಮಂಗಳೂರು: ನಗರದ ಪಿಎಫ್ಐ ಮತ್ತು ಎಸ್​ಡಿಪಿಐ ಕಚೇರಿ ಹಾಗೂ ಕೆಲ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳ ಪರಿಶೀಲನೆ ಮುಕ್ತಾಯಗೊಂಡಿದ್ದು, ಮೂವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಪಿಎಫ್ಐ ಮುಖಂಡರಾದ ಅಶ್ರಫ್ ಎ.ಕೆ, ಮೊಹಿದ್ದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಸ್​ಡಿಪಿಐ ಮುಖಂಡ ಅಥಾವುಲ್ಲ ಜೋಕಟ್ಟೆ ತಿಳಿಸಿದ್ದಾರೆ.

ಮುಂಜಾನೆ 3.30 ರ ಸುಮಾರಿಗೆ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್​ಡಿಪಿಐ, ಪಿಎಫ್ಐ ಜಿಲ್ಲಾ ಕಚೇರಿ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು, ಸುಮಾರು 5 ಗಂಟೆಗಳ ಕಾಲ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ಲ್ಯಾಪ್ ಟಾಪ್, ದಾಖಲೆ ಪತ್ರ ಮತ್ತು ಕಾರ್ಯಕ್ರಮದ ಫೋಟೋಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.